ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಇಂದು ನಟ ಧರ್ಮೇಂದ್ರ ನಿಧನರಾಗಿದ್ದಾರೆ.
ಇತ್ತೀಚೆಗೆ ಧರ್ಮೇಂದ್ರ ಅವರ ಸಾವಿನ ವದಂತಿಗಳು ಹರಡಿದ್ದು, ನಂತರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿತ್ತು.
ಬಾಲಿವುಡ್ ಹೀ ಮ್ಯಾನ್ ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ.





