Mysore
30
scattered clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನಕ್ಕೆ ಒಳಗಾದ ನಾನಾ ಪಾಟೇಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಜೀವ ಉಳಿಸಲು ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯ ಮತ್ತು ಖಡಕ್ ಡೈಲಾಗ್‌ಗಳಿಂದ ಜನಪ್ರಿಯರಾಗಿದ್ದ ನಾನಾ ಪಾಟೇಕರ್, ಕ್ರಾಂತಿವೀರ್, ಪರಿಂದಾ, ಅಬ್ ತಕ್ ಛಪ್ಪನ್ ಸೇರಿದಂತೆ ಹಲವು ಸೂಪರ್‌ಹಿಟ್ ಚಿತ್ರಗಳಲ್ಲಿ ನಟಿಸಿದ್ದರು.

ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಹಾಗೂ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದ ನಾನಾ ಪಾಟೇಕರ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

Tags:
error: Content is protected !!