ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪ ರಾಷ್ಟ್ರಪತಿಗೆ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.
ಇದನ್ನು ಓದಿ; ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆ
ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಸೇರಿದಂತೆ ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ.
ಅಧಿಕಾರ ಸ್ವೀಕರಿಸುವ ಮೊದಲು ರಾಧಾಕೃಷ್ಣನ್ ಅವರು ಮಹಾರಾಷ್ಟ್ರ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಲಿದ್ದು, ರಾಷ್ಟ್ರಪತಿಗೆ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿಕೊಡಲಿದ್ದಾರೆ.





