ದೇಶ- ವಿದೇಶ

ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌

ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪ ರಾಷ್ಟ್ರಪತಿಗೆ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.

ಇದನ್ನು ಓದಿ; ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆ

ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಸೇರಿದಂತೆ ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ.

ಅಧಿಕಾರ ಸ್ವೀಕರಿಸುವ ಮೊದಲು ರಾಧಾಕೃಷ್ಣನ್ ಅವರು ಮಹಾರಾಷ್ಟ್ರ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಲಿದ್ದು, ರಾಷ್ಟ್ರಪತಿಗೆ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿಕೊಡಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

1 hour ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

1 hour ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

1 hour ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago