ನವದೆಹಲಿ: ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜಗದೀಪ್ ಧನಕರ್(73) ಅವರಿಗೆ ಸುಮಾರು ಮಧ್ಯ ರಾತ್ರಿ 2 ಗಂಟೆ ವೇಳೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಎಐಐಎಂಎಸ್‌ನ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜೀವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಇನ್ನು ಜಗದೀಪ್ ಧನಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ತಂಡವು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ.





