ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣಕ್ಕಿಳಿಯಲಿದ್ದಾರೆ.
ಭಾನುವಾರ ಹೊಸದಿಲ್ಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷವು ತನ್ನ ಸಂಸದೀಯ ಮಂಡಳಿಯ ಸಭೆಯನ್ನು ನಡೆಸಿತು. ಬಳಿಕ ಅಭ್ಯರ್ಥಿಯನ್ನು ಘೋಷಿಸಿತು.
ಸಿ.ಪಿ ರಾಧಕೃಷ್ಣನ್ ಕೊಯಮತ್ತೂರಿನಿಂದ ಎರಡು ಭಾರಿ ಸಂಸದರಾಗಿದ್ದರು. ಮಾಜಿ ಪ್ರಧಾನಿ ವಾಜಪೇಯಿ ಮತ್ತು ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿ ಅವರ ನಾಯಕತ್ವದಡಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಜಗದೀಪ್ ಧಂಖರ್ (74) ಅವರು ಆರೋಗ್ಯ ಕಾರಣಗಳನ್ನು ನೀಡಿ ಜುಲೈ 21, 2025 ರಂದು ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 9 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದ ಮೊದಲ ಮಹಡಿಯಲ್ಲಿ ಮತದಾನ ನಡೆಯಲಿದೆ.
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…