ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ.
ಈ ನಿರ್ಬಂಧ ದೃಢಪಡಿಸಿರುವ ವೀಕ್ಷಕ ಸುಬ್ರತಾ ಗುಪ್ತಾ ಅವರು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಲ್ಲಿಯೂ ಯಾವುದೇ ವಿಜಯೋತ್ಸವ ಆಚರಣೆಗಳಿಗೆ ಅವಕಾಶ ನೀಡಲಾಗುವುದಿಲ್ಲ. ಸೂಕ್ಷ್ಮ ಎಣಿಕೆ ಪ್ರಕ್ರಿಯೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳು ಹೇಳಿದ್ದಾರೆ.





