ಹೊಸದಿಲ್ಲಿ : ಭಾರತದ ವಿವಿಧ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ.ಗಳನ್ನು ವಂಚಿಸಿ ವಿದೇಶಗಳಿಗೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಬ್ರಿಟನ್‌ನಲ್ಲಿರುವ ಕೆಲವು ದೇಶಭ್ರಷ್ಟರು ಶೀಘ್ರದಲ್ಲೇ ಭಾರತಕ್ಕೆ ಗಡೀಪಾರಾಗುವ ಬೆಳವಣಿಗೆಗಳು ಕಂಡು ಬರುತ್ತಿವೆ.
ಯುನೈಟೆಡ್ ಕಿಂಗ್‌ಡಮ್‌ನಲ್ಲಿ (ಯು.ಕೆ.) ಅವಿತಿರುವ ವಿಜಯ್ ಮಲ್ಯ, ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ನ್ಯಾಯಾಂಗ ವ್ಯವಸ್ಥೆ ಈಗಾಗಲೇ ಒಪ್ಪಿಗೆ ನೀಡಿದ್ದು, ಈಗಾಗಲೇ ಅಲ್ಲಿನ ತಜ್ಞರ ತಂಡವೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಮಲ್ಯ ಅಥವಾ ನೀರವ್ ಮೋದಿಯವರಿಗಾಗಿ ನಿಗದಿಗೊಳಿಸಲಾಗಿರುವ ಹೈ ಸೆಕ್ಯುರಿಟಿ ಜೈಲು ಕೊಠಡಿಗಳ ಸಮುಚ್ಚಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದೆ.
ಈಗಾಗಲೇ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಮುಂತಾದವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ, ಯುಕೆ ಸರ್ಕಾರಕ್ಕೆ ಮನವಿ ಮಾಡಿದೆ. ಇವರಷ್ಟೇ ಅಲ್ಲದೆ, ಯುಕೆನಲ್ಲಿ ನೆಲೆಸಿರುವ ಭಾರತೀಯ ಮೂಲದ ಕಳ್ಳಸಾಗಣೆದಾರರು, ಅಕ್ರಮ ಶಸ್ತ್ರಾಸ್ತ್ರ ಸರಬರಾಜುದಾರರು ಸೇರಿ ಒಟ್ಟು ೨೦ ಮಂದಿಯನ್ನು ಭಾರತಕ್ಕೆ ಗಡೀಪಾರು ಮಾಡುವಂತೆ ಭಾರತ ಸರ್ಕಾರ, ಯುಕೆ ಸರ್ಕಾರವನ್ನು ಕೋರಿದೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…