ದೇಶ- ವಿದೇಶ

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.

ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲದ ಕೊರತೆಯಿರುವುದರಿಂದ ವಿಜಯ್‌ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದಾರೆ.

ಈ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷವು ಟಿವಿಕೆಗೆ ಬೆಂಬಲ ಘೋಷಿಸಿದರೂ ಇನ್ನೂ ಐದು ಶಾಸಕರು ಬೆಂಬಲ ಅಗತ್ಯವಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌, ವಿಜಯ್‌ ಅವರಿಗೆ ಬಹುಮತ ಸಾಬೀತುಪಡಿಸಿ ಪ್ರಮಾಣವಚನ ಸ್ವೀಕರಿಸುವಂತೆ ತಿಳಿಸಿದ್ದಾರೆ. ಇದರಿಂದ ಇಂದು ನಿಗದಿಯಾಗಿದ್ದ ವಿಜಯ್‌ ಅವರ ಪ್ರಮಾಣವಚನ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.

ಈ ನಡುವೆ ಇಂದು ಕೂಡ ವಿಜಯ್‌ ಅವರು ರಾಜ್ಯಪಾಲರನ್ನು ಭೇಟಿ ಮಾಡಿ, 112 ಶಾಸಕರ ಬೆಂಬಲ ಇರುವ ಪತ್ರವನ್ನು ಸಲ್ಲಿಸಿದ್ದಾರೆ.

ಇದಕ್ಕೆ ಒಪ್ಪದ ರಾಜ್ಯಪಾಲರು 118 ಶಾಸಕರ ಬಹುಮತ ಸಾಬೀತುಪಡಿಸಿ ಸರ್ಕಾರ ರಚನೆ ಮಾಡಿ, 42 ಗಂಟೆಗಳಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago