ದೇಶ- ವಿದೇಶ

ಶಂಭುಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ವಿನೇಶ್‌ ಫೋಗಟ್‌ ಬೆಂಬಲ

ಚಂಡೀಗಢ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಂಜಾಬ್‌ ಹಾಗೂ ಹರಿಯಾಣ ನಡುವಿನ ಶಂಭು ಗಡಿಯಲ್ಲಿ ನಡೆಯುತ್ತಿರುವ ಅನ್ನದಾತರ ಪ್ರತಿಭಟನೆಗೆ ಒಲಿಂಪಿಕ್ಸ್ ಕುಸ್ತಿಪಟು ವಿನೇಶ್‌ ಫೋಗಟ್‌ ಬೆಂಬಲ ಸೂಚಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ವಿನೇಶ್‌ ಫೋಗಟ್‌ ಅವರು, ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ. ನಿಮ್ಮ ಬೇಡಿಕೆಗಳು ಕಾನೂನು ಬಾಹಿರವಲ್ಲ ಎಂದರು.

ಎಲ್ಲಾ ರೈತರನ್ನು ನೋಡಿ ತುಂಬಾ ನೋವಾಗುತ್ತಿದೆ. ಕೆಲವೊಮ್ಮೆ ಅವರಿಗಾಗಿ ಏನು ಮಾಡಲು ಸಾಧ್ಯವಾಗದೇ ನಾವು ಅಸಹಾಯಕರಾಗುತ್ತೇವೆ. ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವ ನಾವು ನಮ್ಮ ಕುಟುಂಬಕ್ಕಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಸರ್ಕಾರ ರೈತರ ಮಾತನ್ನು ಆಲಿಸಬೇಕು ಎಂದು ಮನವಿ ಮಾಡಿದರು.

200 ದಿನಗಳು ಕಳೆದರೂ ತಮ್ಮ ಬೇಡಿಕೆಗಳಿಗೆ ಮನ್ನಣೆ ಸಿಗದ ಕಾರಣ ರೈತರು ರಸ್ತೆಯಲ್ಲೇ ಧರಣಿ ಕುಳಿತಿದ್ದಾರೆ. ಇದು ಬೇಸರದ ಸಂಗತಿ ಎಂದರು.

ರೈತರು ನಮಗೆ ಆಹಾರ ನೀಡದಿದ್ದರೆ, ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ಹೇಗೆ ಸಾಧ್ಯವಾಗುತ್ತಿತ್ತು ಎಂದು ಪ್ರಶ್ನಿಸಿದ ಅವರು, ಸರ್ಕಾರವು ರೈತರ ಕಷ್ಟಗಳನ್ನು ಆಲಿಸಬೇಕು. ಅವರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

14 mins ago

PUC RESULT | ನಾಳೆ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…

21 mins ago

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

2 hours ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

2 hours ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

2 hours ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

2 hours ago