Mysore
23
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಬಾಂಗ್ಲಾದಲ್ಲಿ ಮುಂದುವರಿದ ಹಿಂಸಾಚಾರ: ಸರ್ವಪಕ್ಷ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ವ ಪಕ್ಷ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿದ ನಂತರವೂ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ವಪಕ್ಷ ಸಭೆ ಕರೆದು, ಚರ್ಚೆ ನಡೆಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂಸಾಚಾರ, ಅರಾಜಕತೆ ಸೃಷ್ಟಿಯಾಗಿದ್ದು, ಭಾರತ ಬಾಂಗ್ಲಾ ಗಡಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವ ಪಕ್ಷ ಸಭೆ ಕರೆದು ಎಲ್ಲರ ಬಳಿಯೂ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ.

ಸಂಸತ್‌ ಭವನದಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿದೇಶಾಂಗ ಸಚಿವ ಜೈಶಂಕರ್‌, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಂಸತ್‌ನಲ್ಲಿ ಬಾಂಗ್ಲಾ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

ಇನ್ನು ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್‌ ಹಸೀನಾ ರಾಜೀನಾಮೆ ನೀಡಿದ್ದು, ಢಾಕಾದಲ್ಲಿರುವ ತಮ್ಮ ನಿವಾಸವನ್ನು ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದಲ್ಲಿ ಆದ ಕ್ಷಿಪ್ರ ಬೆಳವಣಿಗೆಗಳ ಬಗ್ಗೆ ಭಾರತದಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಇಲ್ಲಿ ಕೈಗೊಳ್ಳಬೇಕಾದ ಮುಂದಿನ ಕಠಿಣ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!