ಕಠ್ಮಂಡು: ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ನೇಪಾಳದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕಠ್ಮಂಡು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ವಶಕ್ಕೆ ಪಡೆದಿದೆ.
ಇನ್ನು ನವದೆಹಲಿ-ಕಠ್ಮಂಡು ನಡುವೆ ಪ್ರತಿ ದಿನ ಸಂಚರಿಸುವ ಏರ್ ಇಂಡಿಯಾ ವಿಮಾನಗಳು ರದ್ದಾಗಿವೆ. ಇಂಡಿಗೋ, ನೇಪಾಳ ಏರ್‌ಲೈನ್ಸ್ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ನೇಪಾಳದಲ್ಲಿ ಹಿಂಸಾಚಾರ ಮುಂದುವರಿದಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಮುಂದುವರಿದಿದೆ.
ಇನ್ನು ಪ್ರತಿಭಟನಾಕಾರರು ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರ ಪತ್ನಿ ರಾಜ್ಯಲಕ್ಷ್ಮೀ ಚಿತ್ರಾಕರ್ ಅವರು ಸಜೀವ ದಹನಗೊಂಡಿದ್ದಾರೆ.
ಸಾಮಾಜಿಕ ಮಾಧ್ಯಮಗಳ ಮೇಲಿನ ಅಲ್ಪಾವಧಿಯ ನಿಷೇಧದ ವಿರುದ್ಧದ ಪ್ರತಿಭಟನೆಗಳು ಹೆಚ್ಚು ಹಿಂಸಾತ್ಮಕವಾಗಿ ಬೆಳೆದಿವೆ.





