ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಎಂದಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ವಾಷಿಂಗ್ಟನ್ ಡಿಸಿ ಹೋಟೆಲ್‌ನಲ್ಲಿ ನಡೆದ ಭದ್ರತಾ ಲೋಪದ ಘಟನೆಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯ ಮತ್ತು ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ನಿರಾಳವಾಯಿತು. ಅವರ ಸುರಕ್ಷತೆ ಹಾಗೂ ಯೋಗಕ್ಷೇಮಕ್ಕಾಗಿ ನಾನು ಹಾರೈಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಮತ್ತು ಅದನ್ನು ಸ್ಪಷ್ಟವಾಗಿ ಖಂಡಿಸಬೇಕು ಎಂದು ಹೇಳಿದ್ದಾರೆ.
ದಾಳಿ ಸಂಬಂಧ ಶಂಕಿತ ದಾಳಿಕೋರನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಟ್ರಂಪ್ ಅವರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತೇ ಎಂಬುದು ತನಿಖೆಯ ಬಳಿಕವಷ್ಟೇ ತಿಳಿದು ಬರಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…