Mysore
19
scattered clouds

Social Media

ಭಾನುವಾರ, 11 ಜನವರಿ 2026
Light
Dark

ನೇಪಾಳದಲ್ಲಿ ಮುಂದುವರಿದ ಹಿಂಸಾಚಾರ: ವಿತ್ತ ಸಚಿವರನ್ನು ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಪ್ರತಿಭಟನಾಕಾರರು

nepal violence

ಕಠ್ಮಂಡು: ಸೋಷಿಯಲ್‌ ಮೀಡಿಯಾ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ನೇಪಾಳದಲ್ಲಿ ಯುವಜನತೆ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಸಂಸತ್‌ ಕಟ್ಟಡ, ಸರ್ಕಾರಿ ಕಚೇರಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ. ಹಣಕಾಸು ಸಚಿವರನ್ನು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ವಿತ್ತ ಸಚಿವ ಬಿಷ್ಣು ಪ್ರಸಾದ್‌ ಪೊಡೆಲ್‌ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರು, ಸಚಿವರು ಮನೆಯಿಂದ ಹೊರಬರುತ್ತಿದ್ದಂತೆ ಅವರನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ.

ನಡು ರಸ್ತೆಯಲ್ಲಿ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಬೀದಿ ಬೀದಿಗಳಲ್ಲಿ ಸಚಿವರನ್ನು ಹಿಂಬಾಲಿಸಿಕೊಂಡು ಹೋಗಿ ಹೊಡೆದಿದ್ದಾರೆ. ಬಳಿಕ ಗುಂಪೊಂದು ಸಚಿವರನ್ನು ರಕ್ಷಿಸಿ ಕರೆದೊಯ್ದಿದೆ.

Tags:
error: Content is protected !!