ದೇಶ- ವಿದೇಶ

ಬೆಳೆ ವಿಮೆ ಯೋಜನೆಗಳ ವರ್ಷ ವಿಸ್ತರಣೆಗೆ ಸಂಪುಟ ಅಸ್ತು

ಹೊಸದಿಲ್ಲಿ: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಮತ್ತು ಪುನರ್‌ರಚಿಸಲಾದ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

2025-26 ರವರೆಗೆ ಬೆಳೆ ವಿಮೆ ಯೋಜನೆ ಮುಂದುವರಿಸಲು ಬುಧವಾರ ಅನುಮೋದನೆ ಸಿಕ್ಕಿದು, ಈ ಪ್ರಮುಖ ಯೋಜನೆಗಳ ಅನುಷ್ಠಾನದ ವೇಳೆ ತಂತ್ರಜ್ಞಾನದ ಅಳವಡಿಕೆಗಾಗಿ ಪ್ರತ್ಯೇಕವಾಗಿ 824.77ಕೋಟಿ ನಿಧಿಯನ್ನು ರಚಿಸಲಾಗಿದೆ.

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಪ್ರಸಾರ ಸಚಿವ ಅಶ್ವಿನ್‌ ವೈಷ್ಣವ್‌, ವಿಮೆಗಳ ಕುರಿತ ಯೋಜನೆಗಳಿಗೆ ರೈತರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಈ ಯೋಜನೆಗಳನ್ನು ಐದನೈದನೆ ಹಣಕಾಸು ಆಯೋಗದ ಅವಧಿ ಮುಗಿಯುವವರೆಗು ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ತಾಂತ್ರಿಕ ಉಪಕ್ರಮಗಳಿಗೆ, ಸಂಶೋಧನಾ ಚಟುವಟಿಕೆಗಳಿಗೆ ಈ ನಿಧಿಯನ್ನು ಬಳಸಲಾಗುತ್ತದೆ. ಬೆಳೆ ಹಾನಿ, ಕ್ಲೈಮ್‌ ಇತ್ಯರ್ಥ ಮತ್ತು ವಿವಾದಗಳನ್ನು ತ್ವರಿತವಾಗಿ ಬಗೆಹರಿಸಲು ತಂತ್ರಜ್ಞಾನ ಬಳಕೆ ಸಹಾಯವಾಗಲಿದೆ ಎಂದರು.

ತಂತ್ರಜ್ಞಾನ ಆಧಾರಿತ ಆದಾಯ ಮುನ್ಸೂಚನೆ ವ್ಯವಸ್ಥೆಯಡಿ ರಿಮೋಟ್‌ ಸೆನ್ಸಿಂಗ್‌ ತಂತ್ರಜ್ಞಾನ ಬಳಸಿಕೊಂಡು ಇಳುವರಿ ಅಂದಾಜು ಮಾಡಲಾಗುತ್ತದೆ. ಕರ್ನಾಟಕ ಸೇರಿದಂತೆ 9 ಪ್ರಮುಖ ರಾಜ್ಯಗಳು ಈ ತಂತ್ರಜ್ಞಾನ ಅಳವಡಿಸಿಕೊಂಡಿವೆ. ಇತರ ರಾಜ್ಯಗಳಲ್ಲಿ ತಂತ್ರಜ್ಞಾನ ಅಳವಡಿಕೆ ಆರಂಭವಾಗಿದೆ ಎಂದು ಸಚಿವರು ತಿಳಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

16 seconds ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

14 mins ago

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

4 hours ago

ಸೈಕಲ್ ನಂಜುಂಡಸ್ವಾಮಿಯ ಪಂಕ್ಚರ್ ಶಾಪ್ ಖಾಲಿ ಖಾಲಿ

ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…

4 hours ago

ಶಾಂತಿದೂತನ ನಾಡಿನಲ್ಲಿ ದ್ವೇಷದ ಕೆನ್ನಾಲಿಗೆ

ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…

4 hours ago

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

4 hours ago