ನವದೆಹಲಿ: ಕಳೆದ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಅರ್ಜಿದಾರರು ಭಾರತೀಯ ಚುನಾವಣಾ ಆಯೋಗವನ್ನು ಸಂಪರ್ಕಿಸಬಹುದು ಎಂದು ಅಭಿಪ್ರಾಯಪಟ್ಟಿದೆ.
ಇನ್ನು ಮತದಾರರ ಪಟ್ಟಿಯಲ್ಲಿ ಅಕ್ರಮ ಎಸಗಲಾಗಿರುವುದರ ಸಂಬಂಧ ಚುನಾವಣಾ ಆಯೋಗದಲ್ಲಿ ದೂರು ಸಲ್ಲಿಸಿ ಎಂದು ಕೋರ್ಟ್ ಸೂಚನೆ ನೀಡಿತು. ಈ ವೇಳೆ ಅರ್ಜಿದಾರರ ಪರ ವಕೀಲರು ಉತ್ತರಿಸಿ, ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದ್ದು, ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಾದಿಸಿದರು.
ಚುನಾವಣಾ ಆಯೋಗ ಯಾವಾಗ ಕ್ರಮ ಕೈಗೊಳ್ಳಬೇಕು ಎಂದು ಗಡುವು ನಿಗದಿ ಮಾಡಬೇಕು ಎಂದು ಅರ್ಜಿದಾರರು ಸರ್ವೋಚ್ಛ ನ್ಯಾಯಪೀಠಕ್ಕೆ ಮನವಿಯನ್ನೂ ಮಾಡಿದರು. ಈ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.
ಇದನ್ನು ಓದಿ: ರಾಹುಲ್ ಗಾಂಧಿಗೆ ನೋಟಿಸ್: ಚುನಾವಣಾ ಆಯೋಗದವನ್ನೇ ಪ್ರಶ್ನಿಸಿದ ಡಿಸಿಎಂ ಡಿಕೆಶಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಈ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ, ಇದರಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ನಡುವಿನ ಒಪ್ಪಂದದಿಂದಾಗಿ ಚುನಾವಣೆಯಲ್ಲಿ ದೊಡ್ಡ ಕ್ರಿಮಿನಲ್ ವಂಚನೆ ನಡೆದಿದೆ ಎಂದು ಸ್ಫೋಟಕ ಹೇಳಿಕೆಗಳನ್ನು ನೀಡಲಾಗಿತ್ತು. ಅದನ್ನು ರಾಹುಲ್ ಗಾಂಧಿ ಮತ ಕಳ್ಳತನ ಎಂದು ಕರೆದರು.
ಕರ್ನಾಟಕದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಮತದಾರರ ಪಟ್ಟಿಯ ಸಹಿತ ವಿವರಿಸಿದ್ದರು.
ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸುವವರೆಗೆ ಮತ್ತು ಪಟ್ಟಿಗಳ ಸ್ವತಂತ್ರ ಲೆಕ್ಕಪರಿಶೋಧನೆ ಪೂರ್ಣಗೊಳ್ಳುವವರೆಗೆ ಮತದಾರರ ಪಟ್ಟಿಗಳ ಯಾವುದೇ ಪರಿಷ್ಕರಣೆ ಅಥವಾ ಅಂತಿಮಗೊಳಿಸುವಿಕೆಯನ್ನು ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿತ್ತು. ಆದರೆ ನ್ಯಾಯಾಲಯ ಯಾವುದನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ.
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…