ದೇಶ- ವಿದೇಶ

ಮುಂಬೈ ಮುನ್ಸಿಪಲ್‌ ಚುನಾವಣೆಯಲ್ಲೂ ವೋಟ್‌ ಚೋರಿ : ರಾಹುಲ್‌ಗಾಂಧಿ ಗಂಭೀರ ಆರೋಪ

ಮುಂಬೈ : ವೋಟಿ ಚೋರಿ ವಿರುದ್ಧ ಸಮರ ಸಾರಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವೋಟ್‌ ಚೋರಿಯಾಗಿದೆ ಎಂದು ಆರೋಪಿಸಿದ್ದಾರೆ.

ವೋಟ್‌ ಹಾಕಿದ ಗುರುತಿನ ಶಾಯಿ ಗುರುತು ಅಳಿಸಿ ಹೋಗುತ್ತಿದೆ ಎಂಬ ಶೀರ್ಷಿಕೆಯ ಮಾಧ್ಯಮ ವರದಿಯನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಚುನಾವಣಾ ಆಯೋಗವು ಜನರನ್ನ ತಪ್ಪು ದಾರಿಗೆ ಎಳೆಯುತ್ತಿರುವುದು ನಮ್ಮ ಪ್ರಜಾಪ್ರಭುತ್ವದಲ್ಲಿ ವಿಶ್ವಾಸ ಕುಸಿಯಲು ಕಾರಣವಾಗಿದೆ ಎಂದು ಎಕ್ಸ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸದ್ಯ ವೈರಲ್ ಆಗಿರುವ ವಿಡಿಯೋಗಳಲ್ಲಿ ಅಸಿಟೋನ್‌ನಂತಹ ರಾಸಾಯನಿಕಗಳನ್ನ ಬಳಸಿ ಶಾಯಿಯನ್ನು ಹೇಗೆ ಅಳಿಸಬಹುದು ಎಂಬುದನ್ನು ತೋರಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಆರೋಪಗಳನ್ನ ತಳ್ಳಿಹಾಕಿದ್ದಾರೆ. ಆದರೆ, ಚುನಾವಣಾ ಆಯೋಗ ತನಿಖೆ ನಡೆಸುವುದಾಗಿ ತಿಳಿಸಿದೆ. ಮುಂದಿನ ಚುನಾವಣೆಗಳಲ್ಲಿ ಸಾಂಪ್ರದಾಯಿಕ ಶಾಯಿಯನ್ನ ಬಳಸಲು ನಿರ್ಧರಿಸಲಾಗಿದೆ.

ಈ ಮಧ್ಯೆ, ನಮ್ಮ ಸಾವಿರಾರು ಕಾರ್ಯಕರ್ತರ ಹೆಸರು ಮತಪಟ್ಟಿಯಿಂದ ಕಾಣೆಯಾಗಿದೆ ಅಂತ ಉದ್ಧವ್ ಶಿವಸೇನೆ ಬಣದ ನಾಯಕ ಸಂಜಯ್‌ರಾವತ್ ಗಂಭೀರ ಆರೋಪ ಮಾಡಿದ್ದಾರೆ.

ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ʼಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಗಳು ಗೆದ್ದು ಬೀಗಿವೆ. 29 ಕಾರ್ಪೊರೇಷನ್‌ಗಳ ಪೈಕಿ 26ರಲ್ಲಿ ಬಿಜೆಪಿ ಕೂಟ ಜಯಭೇರಿ ಬಾರಿಸಿದೆ. ಒಟ್ಟು 2,869 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಶಿಂಧೆ ಶಿವಸೇನೆ 1,500ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಜಯಗಳಿಸಿದೆ. ಬಿಎಂಸಿಯ 224 ವಾರ್ಡ್‌ಗಳಲ್ಲಿ ಬಿಜೆಪಿ ಮಿತ್ರಕೂಟ 131 ಗೆದ್ದಿವೆ. ಮುಂಬೈ, ನವಿಮುಂಬೈ, ಥಾಣೆ, ಪುಣೆ, ನಾಗಪುರ, ನಾಸಿಕ್ ಸೇರಿದಂತೆ ಪ್ರಮುಖ ನಗರಗಳು ಬಿಜೆಪಿ ಪಾಲಾಗಿವೆ. ಈ ಮೂಲಕ, ಇದೇ ಮೊದಲ ಬಾರಿಗೆ ದೇಶದ ಶ್ರೀಮಂತ ಕಾರ್ಪೊರೇಷನ್ ಬಿಎಂಸಿಗೆ ಬಿಜೆಪಿ ಮೇಯರ್ ಸಿಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

1 hour ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

2 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

2 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

2 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

2 hours ago