ದೇಶ- ವಿದೇಶ

Voting | ಮಧ್ಯಾಹ್ನ 1 ಗಂಟೆ ವೇಳೆಗೆ ತಮಿಳುನಾಡು ಶೇ.56.81, ಪ.ಬಂಗಾಳದಲ್ಲಿ ಶೇ.62.18ರಷ್ಟು ಮತದಾನ

ಚೆನ್ನೈ : ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತ್ತು ನಾಗರಿಕರು ತಮ್ಮ ಮತ ಹಕ್ಕು ಚಲಾಯಿಸಿದರು.

ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳಿಗೆ ಇಂದು ಗುರುವಾರ 7 ಗಂಟೆಗೆ ಮತದಾನ ಆರಂಭವಾಗಿವೆ. ಮಧ್ಯಾಹ್ನ 1 ಗಂಟೆ ವೇಳೆಗೆ ತಮಿಳುನಾಡುವಿನಲ್ಲಿ ಶೇ.56.81ರಷ್ಟು ಮತದಾನವಾದರೆ, ಪಶ್ಚಿಮ ಬಂಗಾಳದಲ್ಲಿ ಶೇ.62.18ರಷ್ಟು ಮತದಾನ ಆಗಿದೆ.

ತಮಿಳುನಾಡಿನಲ್ಲಿ 5.73 ಕೋಟಿಗೂ ಹೆಚ್ಚು ಮತದಾರರು 4,023 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮುಖ್ಯವಾಗಿ ಡಿಎಂಕೆ ನೇತೃತ್ವದ ಮೈತ್ರಿ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ನಡುವಿನ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಐದು ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಇದಲ್ಲದೆ, ನಟ ವಿಜಯ ಅವರ ಟಿವಿಕೆ ಪಕ್ಷದ ಚುನಾವಣಾ ಪ್ರವೇಶವು ಸ್ಪರ್ಧೆಗೆ ಹೊಸ ಆಯಾಮವನ್ನು ನೀಡಿದ್ದು, ದ್ರಾವಿಡ ಪಕ್ಷಗಳಿಗೆ ಕಠಿಣ ಸವಾಲು ಎದುರಾಗಿದೆ.

ಪಶ್ಚಿಮ ಬಂಗಾಳದಲ್ಲಿ, ಸುಮಾರು 1.75 ಕೋಟಿ ಮಹಿಳೆಯರನ್ನು ಒಳಗೊಂಡಂತೆ 3.60 ಕೋಟಿಗೂ ಹೆಚ್ಚು ಮತದಾರರು ರಾಜ್ಯದ 294 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳನ್ನು ಒಳಗೊಂಡ ಎರಡು ಹಂತಗಳ ಮೊದಲ ಹಂತದಲ್ಲಿ ಮತದಾನಕ್ಕೆ ಅರ್ಹರಾಗಿದ್ದಾರೆ. ಮೂರು ಅವಧಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹಾಗೂ ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟಿದ್ದೆ.

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮತ ಎಣಿಕೆ ಮೇ 4ರಂದು ನಡೆಯಲಿದೆ. ಇದೇ ದಿನ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಮತ ಎಣಿಕೆ ನಡೆಯಲಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago