Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

Waqf Act hearing; ವಕ್ಫ್‌ ಕಾಯ್ದೆ ವಿಚಾರದಲ್ಲಿ ಮಧ್ಯಂತರ ಆದೇಶ ನೀಡಿದ ಸುಪ್ರೀಂಕೋರ್ಟ್: ಕೇಂದ್ರಕ್ಕೆ 1 ವಾರ ಗಡುವು

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ವಕ್ಫ್‌ ತಿದ್ದುಪಡಿ ಕಾಯ್ದೆಯ (Waqf Act) ವಿರುದ್ಧ ಸುಪ್ರೀಂಕೋರ್ಟ್‌ (Supreme Court) ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಯಿತು.

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, 2025ರ ವಕ್ಫ್‌ ಕಾಯ್ದೆಗೆ ಸಂಬಂಧಿಸಿದ ವಿಷಯದಲ್ಲಿ ಕೇಂದ್ರವು ಏಳು ದಿನಗಳಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುತ್ತದೆ ಎಂಬ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರ ಹೇಳಿಕೆಯನ್ನು ಸುಪ್ರೀಂಕೋರ್ಟ್‌ ದಾಖಲಿಸಿಕೊಂಡಿತ್ತು.

ವಕ್ಫ್‌ ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಕೇಂದ್ರ ವಕ್ಫ್‌ ಕೌನ್ಸಿಲ್‌ ಮತ್ತು ರಾಜ್ಯ ವಕ್ಫ್‌ ಮಂಡಳಿಗಳಿಗೆ ಯಾವುದೇ ನೇಮಕಾತಿಯನ್ನು ಮಾಡಲಾಗುವುದಿಲ್ಲ ಎಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್‌ 7 ದಿನಗಳ ನಿಗದಿತ ಸಮಯದೊಳಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಮೇ.5ರಂದು ವಿಚಾರಣೆ ನಡೆಯಲಿದೆ ಎಂದು ವಿಚಾರಣೆಯನ್ನು ಮುಂದೂಡಿತು.

Tags:
error: Content is protected !!