ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ ಘಟನೆ ನಡೆದಿದೆ.
ಕರ್ನಾಟಕದಿಂದ ತೆರಳಿರುವ ಹಲವಾರು ವಾಹನಗಳನ್ನು ತಮಿಳುನಾಡಿನ ತೂತುಕುಡಿ ಬಳಿ ತಡೆದಿದ್ದು, ಕನ್ನಡ ಬಾವುಟವನ್ನು ತೆಗೆದು ಹಾಕುವಂತೆ ತಾಕೀತು ಮಾಡಿದ್ದಾರೆ.
ಇದು ತಮಿಳುನಾಡು. ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕುವಂತಿಲ್ಲ ಎಂದು ಗಲಾಟೆ ಮಾಡಿದ್ದಾರೆ. ಕನ್ನಡಿಗರ ವಾಹನವನ್ನು ತಡೆದು ತಮಿಳು ಯುವಕರು ಗಲಾಟೆ ಮಾಡುತ್ತಿರುವ ಬಗ್ಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ತಮಿಳು ಪುಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಚಾಮರಾಜನಗರದ ಹರದನಹಳ್ಳಿಯ ಮಣಿ ನಾಯ್ಕ ಹಾಗೂ ಸ್ನೇಹಿತರು ಟಿಟಿ ವಾಹನದಲ್ಲಿ ಕನ್ನಡ ಧ್ವಜ ಅಳವಡಿಸಿಕೊಂಡು ಯಾತ್ರೆಗೆ ತೆರಳುತ್ತಿದ್ದಾಗ, ತಮಿಳುನಾಡಿನ ತೂತುಕುಡಿ ಸಮೀಪ ವಾಹನವನ್ನು ಅಡ್ಡಹಾಕಿ ಕೆಲ ತಮಿಳು ಯುವಕರು ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…