ದೇಶ- ವಿದೇಶ

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಹಾಗೂ ಸಂಗ್ರಹ ಅಪರಾಧ: ಸುಪ್ರೀಂಕೋರ್ಟ್‌ ಖಡಕ್‌ ತೀರ್ಪು

ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಹಾಗೂ ಅವುಗಳನ್ನು ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್‌ ಖಡಕ್‌ ಆಗಿ ತೀರ್ಪು ನೀಡಿದೆ.

ಈ ಹಿಂದೆ ತಮಿಳುನಾಡಿನ ಮದ್ರಾಸ್‌ ಹೈಕೋರ್ಟ್‌ನಲ್ಲಿ ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ನೋಡುವುದು ಹಾಗೂ ಸಂಗ್ರಹಿಸುವುದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಪರಾಧವಲ್ಲ ಎಂದು ತೀರ್ಪು ನಿಡಿತ್ತು. ಆದರೆ, ಇದೀಗ ಆ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದು ಇಂದು ಮಹತ್ವದ ತೀರ್ಪು ನೀಡಿದೆ.

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ವಿಚಾರಣೆಯನ್ನು ನಡೆಸಿದ ನಂತರ ಈ ತೀರ್ಪನ್ನು ನೀಡಿದೆ. ಅಲ್ಲದೇ ಮದ್ರಾಸ್‌ ಹೈಕೋರ್ಟ್‌ ಕ್ರಿಮಿನಲ್‌ ಮೊಕದ್ದಮೆಗಳನ್ನು ರದ್ದುಪಡಿಸುವಲ್ಲಿ ದೋಷ ಎಸಗಿದೆ ಎಂದು ಛೀಮಾರಿ ಹಾಕಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago