Mysore
25
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು ನುಗ್ಗಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಈ ಸ್ಥಳದಲ್ಲಿ ಒಟ್ಟು 22 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಏಕಾಏಕಿ ಭಾರೀ ಪ್ರಮಾಣದಲ್ಲಿ ನೀರು ಹಾಗೂ ಮಣ್ಣಿನ ಅವಶೇಷಗಳು ಹರಿದುಬಂದಿದ್ದು, ರಭಸಕ್ಕೆ ಕೆಲವರು ಸುರಂಗದ ಹೊರಗೆ ತಳ್ಳಲ್ಪಟ್ಟಿದ್ದಾರೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

 

Tags:
error: Content is protected !!