ದೇಶ- ವಿದೇಶ

ವಯನಾಡು ಭೂ ಕುಸಿತ: ಕೇರಳ ನೆರವಿಗೆ ಸಿಎಂ ಸಿದ್ದರಾಮಯ್ಯ ಅಭಯ ಅಸ್ತ

ಮೈಸೂರು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿರುವ ಘನಘೋರ ಭೂ ಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಲೇ ಇದೆ.

ಎನ್‌ಡಿಆರ್‌ಎಫ್, ಸ್ವಯಂ ಸೇವಕರು, ಪೊಲೀಸರು ಹಾಗೂ ಸೈನ್ಯದಿಂದ ರಕ್ಷಣಾ ಕಾರ್ಯಚರಣೆ ನಿರಂತರವಾಗಿ ಸಾಗುತ್ತಿದೆ. ಇತ್ತ ಸಿಎಂ ಸಿದ್ದರಾಮಯ್ಯ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಕರೆ ಮಾಡಿ, ಅಗತ್ಯ ನೆರವು ಘೋಷಿಸಿ, ನಿಮ್ಮೊಂದಿಗೆ ನಾವೇದ್ದೇವೆ ಎಂದು ಭರವಸೆ ನೀಡಿದ್ದಾರೆ.

ಈ ಘನಘೋರ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಕಾರ್ಯಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಇರಲಿದೆ. ಅಗತ್ಯ ಸಾಮಾಗ್ರಿ ಹಾಗೂ ರಕ್ಷಣಾ ತಂಡಗಳನ್ನು ಕಳುಹಿಸಲಾಗುತ್ತಿದೆ ಎಂದು ಕೇರಳ ಸಿಎಂಗೆ ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನೆರವಿಗೆ ಹಿರಿಯ ಐಎಎಸ್‌ ಅಧಿಕಾರಿಗಳ ನಿಯೋಜನೆ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್‌ ನಲ್ಲಿ ತಿಳಿಸಿದ್ದಾರೆ.

ಐಎಎಸ್‌ ಅಧಿಕಾರಿಗಳ ಮೊಬೈಲ್‌ ಸಂಖ್ಯೆ:
ಸಿ.ಜಾಫರ್-‌9448355577
ದಿಲೀಶ್‌ ಶಶಿ-9556000514

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ
08226-223163
08226-223161
08226-223160

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago