Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ವಯನಾಡು ಭೂಕುಸಿತ: ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣಕ್ಕೆ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಅನೇಕರು ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಭೂಕುಸಿತಕ್ಕೆ ಒಳಗಾಗಿರುವ ಕೇರಳಕ್ಕೆ ಅಗತ್ಯ ನೆರವು ಹಾಗೂ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಕೇರಳ ಸರ್ಕಾರದೊಂದಿಗೆ ನಾವಿದ್ದೇವೆ. ಕೇರಳಕ್ಕೆ ಅಗತ್ಯ ನೆರವು ಒದಗಿಸುವುದರೊಂದಿಗೆ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿಕೊಡುವ ಮೂಲಕ ನಾವು ಒಟ್ಟಾಗಿ ಅಲ್ಲಿನ ಜನರ ಬದುಕಿನಲ್ಲಿ ಮತ್ತೊಮ್ಮೆ ಭರವಸೆಯ ಆಶಾಕಿರಣವನು ಮೂಡಿಸೋಣ ಎಂದು ತಿಳಿಸಿದ್ದಾರೆ.

Tags: