ತಿರುವನಂತಪುರಂ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಅಣ್ಣ ರಾಹುಲ್ ಗಾಂಧಿ ದಾಖಲೆ ಮುರಿದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಿದ್ದು, 4,10,931 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ಒಟ್ಟು 6,22,338 ಲಕ್ಷ ಮತಗಳನ್ನು ಪಡೆದು ಗೆದ್ದರೆ, ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 2,11,407 ಲಕ್ಷ ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ನವ್ಯಾ ಹರಿದಾಸ್ 1,09,939 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಒಟ್ಟು 6.47 ಲಕ್ಷ ಮತಗಳನ್ನು ಪಡೆದು ಗೆದ್ದಿದ್ದ ರಾಹುಲ್ ಗಾಂಧಿ 3.64 ಲಕ್ಷ ಮತಗಳ ಅಂತರವನ್ನು ಕಾಯ್ದುಕೊಂಡಿದ್ದರು. ಈಗ ಪ್ರಿಯಾಂಕಾ ಗಾಂಧಿ 4.10 ಲಕ್ಷ ಮತಗಳ ಅಂತರದಿಂದ ಗೆಲ್ಲುವ ಮೂಲಕ ರಾಹುಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ರಾಹುಲ್ 2024ರ ಲೋಕಸಭಾ ಚುನಾವಣೆಯಲ್ಲಿ ವಯನಾಡು ಮತ್ತು ರಾಯ್‌ಬರೇಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಸೋನಿಯಾ ಗಾಂಧಿ ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ವಯನಾಡು ಕ್ಷೇತ್ರವನ್ನು ಸೋದರಿ ಪ್ರಿಯಾಂಕಾಗೆ ಬಿಟ್ಟುಕೊಟ್ಟಿದ್ದರು.
ಕಳೆದ ಒಂದು ತಿಂಗಳಿನಿಂದ ಕಾಂಗ್ರೆಸ್‌ನ ಹಿರಿಯ ನಾಯಕಿ ಹಾಗೂ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ, ಪ್ರಿಯಾಂಕಾ ಪರ ವಯನಾಡು ಕ್ಷೇತ್ರದಲ್ಲಿ ಪ್ರಚಾರ ಮಾಡುವ ಮೂಲಕ 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು.
ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…
ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು…
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…
ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…