Mysore
21
clear sky

Social Media

ಗುರುವಾರ, 20 ಆಗಸ್ಟ್ 2026
Light
Dark

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡು: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದ್ದು, ಈ ಮೂಲಕ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದಾರೆ.

ನಾಮಪತ್ರ ಸಲ್ಲಿಸುವುದಕ್ಕಿಂತಲೂ ಮೊದಲು ವಯನಾಡಿನಲ್ಲಿ ಬೃಹತ್‌ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ, ಕ್ಷೇತ್ರದಲ್ಲಿ ಗೆಲ್ಲಿಸಿ ಕೊಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಭಾಗಿಯಾಗಿದ್ದರು.

ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಹಲವು ಕಾಂಗ್ರೆಸ್‌ ನಾಯಕರು ಪ್ರಿಯಾಂಕಾ ಗಾಂಧಿಗೆ ಸಾಥ್‌ ನೀಡಿದರು.

ಇನ್ನು ವಯನಾಡು ಕ್ಷೇತ್ರದಲ್ಲಿ ಬಿಜೆಪಿ ತನ್ನ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನವ್ಯ ಹರಿದಾಸ್‌ ಅವರನ್ನು ಕಣಕ್ಕಿಳಿಸಿದೆ. ಸಿಪಿಐನಿಂದ ಸತ್ಯೇನ್‌ ಮೊಕೇರಿ ಅವರು ಅಖಾಡದಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

 

 

Tags:
error: Content is protected !!