ವಯನಾಡು: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದ್ದು, ಈ ಮೂಲಕ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದಾರೆ.
ನಾಮಪತ್ರ ಸಲ್ಲಿಸುವುದಕ್ಕಿಂತಲೂ ಮೊದಲು ವಯನಾಡಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಿಯಾಂಕಾ ಗಾಂಧಿ, ಕ್ಷೇತ್ರದಲ್ಲಿ ಗೆಲ್ಲಿಸಿ ಕೊಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಗಾಂಧಿಗೆ ಸಾಥ್ ನೀಡಿದರು.
ಇನ್ನು ವಯನಾಡು ಕ್ಷೇತ್ರದಲ್ಲಿ ಬಿಜೆಪಿ ತನ್ನ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನವ್ಯ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ. ಸಿಪಿಐನಿಂದ ಸತ್ಯೇನ್ ಮೊಕೇರಿ ಅವರು ಅಖಾಡದಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…