Mysore
29
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ.

ಸಾವಿನ ವದಂತಿ ಬಳಿಕ ಮೊದಲ ಬಾರಿಗೆ ಕ್ಯಾಮರಾಗಳ ಮುಂದೆ ಬಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 20 ದಿನಗಳ ಅಮೇರಿಕಾ-ಇಸ್ರೇಲ್ ವೈಮಾನಿಕ ದಾಳಿಯ ನಂತರ ಇರಾನ್‌ ಇನ್ಮುಂದೆ ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್‌ ಕ್ಷಿಪಣಿಗಳನ್ನು ತಯಾರಿಸುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಇರಾನ್‌ ಈಗ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸಲು ಸಾಧ್ಯವಿಲ್ಲ. ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್‌ ದಾಸ್ತಾನು ಭಾರೀ ಹಾನಿ ಅನುಭವಿಸುತ್ತಿದೆ. ಶೀಘ್ರದಲ್ಲೇ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಹೇಳಿದರು.

Tags:
error: Content is protected !!