ದೇಶ- ವಿದೇಶ

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದರು.

ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಿದ್ಧ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಸಲಹೆ ಸೂಚನೆ ನೀಡಲಾಗುತ್ತಿದೆ. ಸುರಕ್ಷಿತ ಪ್ರದೇಶಗಳಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಯುದ್ಧ ಪರಿಸ್ಥಿತಿ ಅರಿತು ಮೊದಲೇ ಸೂಚನೆ ಕೊಡಲಾಗಿದೆ. ಸಹಾಯವಾಣಿ ಕೂಡ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.

ಇನ್ನು ಮಧ್ಯಪ್ರಾಚ್ಯದ ಎಲ್ಲಾ ದೇಶಗಳಲ್ಲಿರುವ ಭಾರತೀಯರ ರಕ್ಷಣೆ ಮುಖ್ಯ. ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಲಾಗಿದೆ. ಶಾಂತಿ ಕಾಪಾಡುವವರ ಪರ ಭಾರತ ಇದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

7 mins ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

2 hours ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

2 hours ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

2 hours ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

2 hours ago

ಮಡಿಕೇರಿ| ಕಾಡಾನೆ ದಾಳಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…

3 hours ago