ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಸ್ಪಷ್ಟಪಡಿಸಿದ್ದಾರೆ.
ಇರಾನ್‌ನ ಸರ್ಕಾರಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಯುದ್ಧ ಅಂತ್ಯಕ್ಕೆ ಉನ್ನತ ಮಟ್ಟದಲ್ಲಿ ಪರಿಶೀಲನೆ ಆಗುತ್ತಿದೆ. ಮಧ್ಯವರ್ತಿಗಳ ಮೂಲಕ ಸಂದೇಶ ಬಂದ ಮಾತ್ರಕ್ಕೆ ಅಮೆರಿಕ ಸಂಧಾನ ಮಾತುಕತೆ ನಡೆಸುತ್ತಿದೆ ಎಂದರ್ಥವಲ್ಲ ಎಂದಿದ್ದಾರೆ.
ಇವಾಗ ನಮ್ಮದು ಪ್ರತಿರೋಧ ಅಷ್ಟೆ. ಇದೇ ನಮ್ಮ ನೀತಿಯಾಗಿದೆ. ಯಾವುದೇ ಮಾತುಕತೆ ನಡೆಯುತ್ತಿಲ್ಲ. ಆದರೆ ಅವರು ಮಾತುಕತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ಅದು ಸೋಲಿನ ಸ್ವೀಕಾರವಾಗಿದೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಸಂಧಾನ ನಡೆಯುತ್ತಿದೆ ; ಟ್ರಂಪ್
ಇನ್ನೂ ಈ ಮಧ್ಯೆ ಅಮರಿಕದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, ನಾವು 8 ಯುದ್ಧಗಳನ್ನ ಅಂತ್ಯಗೊಳಿಸಿದ್ದೇವೆ. ಇನ್ನೊಂದಿದೆ ಅದನ್ನು ಗೆಲ್ಲುತ್ತೇವೆ. ಇರಾನ್‌ನೊಂದಿಗೆ ಸಂಧಾನ ಮಾತುಕತೆ ನಡೆಯುತ್ತಿದೆ. ಅವರು ಒಪ್ಪಂದಕ್ಕಾಗಿ ಹಪಾಹಪಿಸುತ್ತಿದ್ದಾರೆ. ಎಲ್ಲಿ ತಮ್ಮ ಜನರೇ ತಮ್ಮನ್ನು ಕೊಲ್ಲಬಹುದು ಎಂಬ ಭಯದಿಂದ ಬಹಿರಂಗವಾಗಿ ಹೇಳಿಕೆ ನೀಡಲು ಹೆದರುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…
ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…
ಅಂಕಾರ: ಇಸ್ತಾನ್‌ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…
ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್…