ದೇಶ- ವಿದೇಶ

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಸ್ಪಷ್ಟಪಡಿಸಿದ್ದಾರೆ.

ಇರಾನ್‌ನ ಸರ್ಕಾರಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಯುದ್ಧ ಅಂತ್ಯಕ್ಕೆ ಉನ್ನತ ಮಟ್ಟದಲ್ಲಿ ಪರಿಶೀಲನೆ ಆಗುತ್ತಿದೆ. ಮಧ್ಯವರ್ತಿಗಳ ಮೂಲಕ ಸಂದೇಶ ಬಂದ ಮಾತ್ರಕ್ಕೆ ಅಮೆರಿಕ ಸಂಧಾನ ಮಾತುಕತೆ ನಡೆಸುತ್ತಿದೆ ಎಂದರ್ಥವಲ್ಲ ಎಂದಿದ್ದಾರೆ.

ಇವಾಗ ನಮ್ಮದು ಪ್ರತಿರೋಧ ಅಷ್ಟೆ. ಇದೇ ನಮ್ಮ ನೀತಿಯಾಗಿದೆ. ಯಾವುದೇ ಮಾತುಕತೆ ನಡೆಯುತ್ತಿಲ್ಲ. ಆದರೆ ಅವರು ಮಾತುಕತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ಅದು ಸೋಲಿನ ಸ್ವೀಕಾರವಾಗಿದೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಂಧಾನ ನಡೆಯುತ್ತಿದೆ ; ಟ್ರಂಪ್‌
ಇನ್ನೂ ಈ ಮಧ್ಯೆ ಅಮರಿಕದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್‌, ನಾವು 8 ಯುದ್ಧಗಳನ್ನ ಅಂತ್ಯಗೊಳಿಸಿದ್ದೇವೆ. ಇನ್ನೊಂದಿದೆ ಅದನ್ನು ಗೆಲ್ಲುತ್ತೇವೆ. ಇರಾನ್‌ನೊಂದಿಗೆ ಸಂಧಾನ ಮಾತುಕತೆ ನಡೆಯುತ್ತಿದೆ. ಅವರು ಒಪ್ಪಂದಕ್ಕಾಗಿ ಹಪಾಹಪಿಸುತ್ತಿದ್ದಾರೆ. ಎಲ್ಲಿ ತಮ್ಮ ಜನರೇ ತಮ್ಮನ್ನು ಕೊಲ್ಲಬಹುದು ಎಂಬ ಭಯದಿಂದ ಬಹಿರಂಗವಾಗಿ ಹೇಳಿಕೆ ನೀಡಲು ಹೆದರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

9 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

9 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

9 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

9 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

11 hours ago