Mysore
19
clear sky

Social Media

ಗುರುವಾರ, 29 ಜನವರಿ 2026
Light
Dark

ಭಾರತದಲ್ಲಿರುವ ನಕ್ಸಲಿಸಂ ಸಂಪೂರ್ಣ ನಾಶ ಮಾಡುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸರ್ಕಾರದ ಕ್ರಮಗಳಿಂದ ನಕ್ಸಲ್‌ ಪೀಡಿತ ಜಿಲ್ಲೆಗಳ ಸಂಖ್ಯೆ 125ರಿಂದ 11ಕ್ಕೆ ಇಳಿದಿದ್ದು, 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದ ಅವರು, ಈ ಕೆಂಪು ಭಯೋತ್ಪಾದನೆಯನ್ನು ನಾಶ ಮಾಡುವ ದಿನ ದೂರವಿಲ್ಲ. ನಕ್ಸಲಿಸಂ ದೇಶದ ವಿರುದ್ಧದ ಪಾಪ ಎಂದು ಹೇಳಿದ್ದಾರೆ. ಮಾವೋವಾದಿ ಉಗ್ರವಾದವು ಭಾರತದ ಯುವಕರಿಗೆ ಮಾಡಿದ ಅನ್ಯಾಯ, ಅದನ್ನು ಸಂಪೂರ್ಣವಾಗಿ ತೊಡೆದು ಹಾಕುವುದೇ ನಮ್ಮ ಸರ್ಕಾರದ ದೃಢಸಂಕಲ್ಪ ಎಂದು ಹೇಳಿದ್ದಾರೆ.

ಇದನ್ನು ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್:‌ 16 ನಕ್ಸಲರ ಹತ್ಯೆ

ಇನ್ನು ಪಹಲ್ಗಾಮ್‌ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ್ದಕ್ಕಾಗಿ ಪಾಕಿಸ್ತಾನ ಹಾಗೂ ಭಯೋತ್ಪಾದಕರಿಗೆ ಆಪರೇಷನ್‌ ಸಿಂಧೂರ್‌ ಮೂಲಕ ಉತ್ತರ ನೀಡಿದ್ದೇವೆ. ದೇಶವು ಗಡಿಯಾಚೆಗಿನ ಬೆದರಿಕೆಗಳನ್ನು ನಾಶ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಭಾರತವು ಈಗ ಚಿಪ್‌ಗಳಿಂದ ಹಿಡಿದು ಹಡಗುಗಳಿಗೆ ಎಲ್ಲವನ್ನೂ ತಯಾರಿಸುತ್ತಿದೆ. ಸ್ವಾವಲಂಬನೆ ಮೂಲಕ ಭಾರತ ಪ್ರಗತಿ ಸಾಧಿಸುತ್ತಿದೆ. ಜೊತೆಗೆ ಈಗಾಗಲೇ ವಿಶ್ವದ ಅತ್ಯಂತ ವೇಗವಾಗಿ ಬೆಳಯುತ್ತಿರುವ ಆರ್ಥಿಕತೆ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಈಗಾಗಲೇ 75 ಗಂಟೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಸರ್ಕಾರ ನೀಡಿದ ಅಂತಿಮ ಸೂಚನೆಯ ನಂತರ 308ಕ್ಕೂ ಹೆಚ್ಚು ಕಟ್ಟಾ ಮಾವೋವಾದಿ ಕಾರ್ಯಕರ್ತರು ಶರಣಾಗತಿಯಾಗಿದ್ದಾರೆ. ಇನ್ನು ದೇಶದಲ್ಲಿರುವ ಅನೇಕ ಜಿಲ್ಲೆಗಳು ಮಾವೋವಾದಿ ಪೀಡಿತದಿಂದ ಮುಕ್ತವಾಗುತ್ತಿದೆ. ಸುಮಾರು 11 ವರ್ಷಗಳ ಹಿಂದೆ 125 ಜಿಲ್ಲೆಗಳು ಮಾವೋವಾದಿ ಹಿಂಸಾಚಾರಕ್ಕೆ ಒಳಗಾಗಿತ್ತು. ಆದರೆ ಇದೀಗ ಇದು 11ಕ್ಕೆ ಇಳಿದಿದೆ ಎಂದು ಹೇಳಿದ್ದಾರೆ.

Tags:
error: Content is protected !!