ನವದೆಹಲಿ: ಉಗ್ರರು ಪಾಕಿಸ್ತಾನದಲ್ಲೇ ಅಡಗಿದ್ರೂ ನುಗ್ಗಿ ಹೊಡೆಯುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ವಿಶ್ವಸಂಸ್ಥೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಸಲಾದ ಭಯೋತ್ಪಾದಕ ತಾಣಗಳ ಮೇಲೆ ಭಾರತ ದಾಳಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ನಿಯಮಿತವಾಗಿ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಇದರಲ್ಲಿ ಪ್ರಮುಖ ಭಯೋತ್ಪಾದಕರು, ಅವರ ವಾಸಸ್ಥಳ ಮತ್ತು ಅವರು ಎಲ್ಲಿಂದ ಕಾರ್ಯನಿರ್ವಹಿಸುತ್ತಾರೆ ಎಂಬುದರ ಕುರಿತು ವಿವರಗಳನ್ನು ನೀಡಲಾಗುವುದು ಎಂದರು.
ಭಯೋತ್ಪಾದಕರು ಪಾಕಿಸ್ತಾನದಲ್ಲಿದ್ದರೆ, ಅವರು ಇರುವ ಸ್ಥಳದಲ್ಲಿಯೇ ನಾವು ಅವರನ್ನು ನುಗ್ಗಿ ಹೊಡೆಯುತ್ತೇವೆ ಎಂದು ಪಾಕಿಸ್ತಾನಕ್ಕೆ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ.





