Mysore
22
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

ಸೋನಮ್‌ ವಾಂಗ್ಚುಕ್‌ಗೆ ಅಗತ್ಯ ವೈದ್ಯಕೀಯ ನೆರವು ನೀಡುತ್ತೇವೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಮಾಹಿತಿ

ನವದೆಹಲಿ: ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ ವೈದ್ಯರ ಸಲಹೆ ಮೇರೆಗೆ ಅಗತ್ಯವಿರುವ ವೈದ್ಯಕೀಯ ನೆರವು ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಸೋನಮ್‌ ವಾಂಗ್ಚುಕ್‌ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕೆಂದು ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಪ್ರತಿಯೊಂದು ಜೀವವೂ ಅಮೂಲ್ಯ. ಸರ್ಕಾರಿ ವೈದ್ಯರು ನಿಯಮತಿವಾಗಿ ವೈದ್ಯಕೀಯವಾಗಿ ಪರೀಕ್ಷಿಸಬೇಕೆಂದು ನಾವು ಬಯಸುತ್ತೇವೆ. ಯಾವುದೇ ಔಷಧಿ ಅಗತ್ಯವಿದ್ದರೆ ಮಧ್ಯಪ್ರವೇಶಿಸಿ ಎಂದು ಕೇಂದ್ರಕ್ಕೆ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ವೈದ್ಯರ ಸಲಹೆ ಮೇರೆಗೆ ಅಗತ್ಯ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

Tags:
error: Content is protected !!