Mysore
17
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಸಿಎಎ, ಎನ್‌ಆರ್‌ಸಿ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ: ರಾಜ್ಯದ ರಾಜಧಾನಿ ಕೊಲ್ಕತ್ತಾದಲ್ಲಿ ನಡೆದ ಈದ್‌ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈದ್‌ ಮಿಲಾದ್‌ ಹಬ್ಬದ ಶುಭಾಶಯ ಕೋರಿ ʼನಾವು ಒಗ್ಗಟ್ಟಾಗಿದ್ದರೆ ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲʼ ಎಂದು ಹೇಳಿಕೆ ನೀಡಿದರು.

ಅಲ್ಲದೇ ʼಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನ್ನು ಒಪ್ಪಲ್ ಸಾಧ್ಯವಿಲ್ಲʼ ಎಂದೂ ಸಹ ಮಮತಾ ಬ್ಯಾನರ್ಜಿ ತಿಳಿಸಿದರು. ʼಚುನಾವಣೆ ಸಂದರ್ಭದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಾರೆ. ಇಂತಹ ದುರುದ್ದೇಶಪೂರಿತ ಸಂಚುಗಳಿಗೆ ಒಳಗಾಗಬಾರದುʼ ಎಂದು ಮನವಿ ಮಾಡಿಕೊಂಡರು.

ʼಐಎನ್‌ಡಿಐಎʼ ಮೈತ್ರಿಕೂಟದ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು, ತೃಣಮೂಲ ಕಾಂಗ್ರೆಸ್‌ ಬಿಜೆಪಿ ವಿರುದ್ಧವಾಗಿದೆ, ಬಂಗಾಳದಲ್ಲಿ ಮತಗಳು ಬೇರೆ ಪಕ್ಷಗಳಿಗೆ ಹೋಗದಂತೆ ನೋಡಿಕೊಳ್ಳಿ ಎಂದೂ ಸಹ ಮಮತಾ ಬ್ಯಾನರ್ಜಿ ಕರೆ ನೀಡಿದರು.

Tags:
error: Content is protected !!