Mysore
20
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮೂರು ವರ್ಷಗಳ ನಂತರ ಜೂನ್‌ನಲ್ಲಿ ಎಲ್‌ನಿನೋ ಪರಿಸ್ಥಿತಿ ಸೃಷ್ಟಿಯಗುವ ನಿರೀಕ್ಷೆ ಇದೆ. ಇದು ಮಾನ್ಸೂನ್‌ ಮಾರುತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ವಾಯುವ್ಯ, ಈಶಾನ್ಯ, ದಕ್ಷಿಣದ ಕೆಲವು ಪ್ರದೇಶ ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಕಡಿಮೆ ಮಳೆ ಆಗಲಿದೆ.

ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಋತುವಿನಲ್ಲಿ ಶೇಕಡಾ.92 ರಷ್ಟು ಅಂದರೆ 80 ಸೆ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ್‌ ಮೊಹಾಪಾತ್ರ ತಿಳಿಸಿದ್ದಾರೆ.

ಎಲ್‌ನಿನೋ ಅಪಾಯ ಹೆಚ್ಚುತ್ತಿರುವ ನಡುವೆಯೂ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್‌ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾಹಿತಿ ಪ್ರಕಾರ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯನು 31% ತೋರಿಸುತ್ತದೆ. ಆದರೆ ಕೊರತೆಯ ಮಳೆಯ ಸಾಧ್ಯತೆ 35%. ಇದು ದೇಶದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯ ಸ್ಪಷ್ಟ ಸೂಚನೆಯಾಗಿದೆ.

 

Tags:
error: Content is protected !!