Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ಮಳೆಯಾಗಲಿದೆ: ಹವಾಮಾನ ಇಲಾಖೆ ಮಾಹಿತಿ

ನವದೆಹಲಿ: ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ನಾಲ್ಕು ತಿಂಗಳ ಕಾಲ ಸರಾಸರಿ ಸುಮಾರು 87 ಸೆಂ.ಮೀ ಮಳೆ ದೀರ್ಘಕಾಲಿನ ಸರಾಸರಿಗಿಂತ 105% ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.

ನೈರುತ್ಯ ಮಾನ್ಸೂನ್‌ ಸಾಮಾನ್ಯವಾಗಿ ಜೂನ್.‌1ರ ಸುಮಾರಿಗೆ ಕೇರಳದ ಮೂಲಕ ತನ್ನ ಮುನ್ನಡೆಯನ್ನು ಪ್ರಾರಂಭಿಸಿ ಸೆಪ್ಟೆಂಬರ್ ಮಧ್ಯಭಾಗದಲ್ಲಿ ಹಿಂದೆ ಸರಿಯುತ್ತದೆ.

ಈ ವರ್ಷದ ಮುನ್ಸೂಚನೆಯ ಪ್ರಕಾರ, ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳು ಅನುಕೂಲಕರ ಮಳೆಯಿಂದ ಪ್ರಯೋಜನ ಪಡೆಯುವ ಸಾಧ್ಯತೆಯಿದೆ.

ಇದನ್ನು ಓದಿ:- ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಇನ್ನು ಕರ್ನಾಟಕ ರಾಜ್ಯದಲ್ಲೂ ಹೆಚ್ಚಿನ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಡಗು ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

Tags: