Mysore
28
broken clouds

Social Media

ಬುಧವಾರ, 29 ಏಪ್ರಿಲ 2026
Light
Dark

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

142 ಕ್ಷೇತ್ರಗಳಲ್ಲಿ ಮತದಾನ
ಎರಡನೇ ಹಂತದಲ್ಲಿ ಕೋಲ್ಕತ್ತ, ನಾಡಿಯಾ, ಪೂರ್ವ ಬರ್ಧಮಾನ್, ಹೂಗ್ಲಿ, ದಕ್ಷಿಣ 24 ಪರಗಣ, ಉತ್ತರ 24 ಪರಗಣ ಮತ್ತು ಹೌರಾ ಜಿಲ್ಲೆಗಳ 142 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಒಟ್ಟು 3.22 ಕೋಟಿಗೂ ಅಧಿಕ ಮತದಾರರು 1,448 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ಭಾರಿ ಭದ್ರತೆ
ಮತದಾನಕ್ಕೆ ಚುನಾವಣಾ ಆಯೋಗ 41,001 ಮತಗಟ್ಟೆಗಳನ್ನು ಸ್ಥಾಪಿಸಿದೆ. ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಕೇಂದ್ರೀಯ ಪಡೆಗಳು ಮತ್ತು ರಾಜ್ಯ ಪೊಲೀಸರನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲಾಗಿದೆ.

ಗಮನಸೆಳೆದ ಭವಾನಿಪುರ ಕ್ಷೇತ್ರ
ಈ ಹಂತದಲ್ಲಿ ಭವಾನಿಪುರ ಕ್ಷೇತ್ರದ ಕಡೆ ಎಲ್ಲರ ಚಿತ್ತ ನೆಟ್ಟಿದೆ. ಇಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಏ.23ರಂದು ನಡೆದ ಮೊದಲ ಹಂತದಲ್ಲಿ ಉತ್ತರ ಬಂಗಾಳದ 8 ಜಿಲ್ಲೆಗಳು ಮತ್ತು ಮುರ್ಷಿದಾಬಾದ್, ನಾಡಿಯಾ, ಬಿರ್ಭೂಮ್, ಹೂಗ್ಲಿಯ 152 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು.

Tags:
error: Content is protected !!