ದೇಶ- ವಿದೇಶ

ಪಶ್ಚಿಮ ಬಂಗಾಳ | ಮತದಾನದ ಹೊತ್ತಲ್ಲೇ ಕಚ್ಚಾ ಬಾಂಬ್‌ ದಾಳಿ ; ಹಲವರು ಗಂಭೀರ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು ನಡೆದಿದೆ.

ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಇದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ.

ಕಚ್ಚಾ ಬಾಂಬ್‌ ದಾಳಿಯ ಬಳಿಕ ಹಿಂಸಾಚಾರ ಪೀಡಿತವಾಗಿರುವ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ತಿಂಗಳು, ಜಿಲ್ಲೆಯ ಜಂಗಿಪುರ ಮತ್ತು ರಘುನಾಥಗಂಜ್ ಪ್ರದೇಶಗಳಲ್ಲಿ ಎರಡು ಗುಂಪುಗಳ ನಡುವೆ ಭಾರೀ ಘರ್ಷಣೆ ನಡೆದಿತ್ತು. ಇದರಿಂದಾಗಿ ಅಧಿಕಾರಿಗಳು ನಿಷೇಧಾಜ್ಞೆ ಹೊರಡಿಸಿ 30 ಜನರನ್ನ ಬಂಧಿಸಲಾಗಿತ್ತು. ಅಂದಿನಿಂದಲೂ ಕೇಂದ್ರ ಪಡೆಗಳು ಸಹ ಈ ಸ್ಥಳದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿವೆ.

ಮೊದಲ ಹಂತದ ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಉತ್ತರ ಬಂಗಾಳದ ಮುರ್ಷಿದಾಬಾದ್, ಜರ್ಗಾಮ, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್ಬುಮ್‌ನಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago