ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು, ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮತದಾನಕ್ಕೆ ಅಡ್ಡಿಪಡಿಸುವ ಅಥವಾ ಮತದಾರರಿಗೆ ಅಡ್ಡಿಯುಂಟು ಮಾಡುವ ಯಾವುದೇ ಪ್ರಯತ್ನದ ವಿರುದ್ಧ ಕಠಿಣ ಕ್ರಮ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಕೊನೆಯ ದಿನದಂದು ಆಡಳಿತರೂಢ ಪಕ್ಷ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ ಭರ್ಜರಿ ಪ್ರಚಾರ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ಪ್ರಮುಖ ಸಮಾವೇಶ ಮತ್ತು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಕಳೆದ 48 ಗಂಟೆಗಳಲ್ಲಿ, ದಕ್ಷಿಣ 24 ಪರಗಣ ಜಿಲ್ಲೆಯ ಭಂಗಾರ್‌ನಲ್ಲಿರುವ ಟಿಎಂಸಿ ಕಾರ್ಯಕರ್ತನ ಮನೆಯಿಂದ ಪೊಲೀಸರು ಡಜನ್‌ಗಟ್ಟಲೆ ಕಚ್ಚಾ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣಾ ಆಯೋಗವು ಕಚ್ಚಾ ಬಾಂಬ್‌ಗಳ ತಯಾರಿಕೆಯಲ್ಲಿ ತೊಡಗಿರುವವರನ್ನು ಬಂಧಿಸಲು ವಿಶೇಷ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಪೊಲೀಸರಿಗೆ ನಿರ್ದೇಶನ ನೀಡಿದೆ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಅಂತಹ ಎಲ್ಲಾ ಪ್ರಕರಣಗಳನ್ನು ತನಿಖೆ ಮಾಡುತ್ತದೆ.
ಮತದಾರರು ನಿರ್ಭೀತಿಯಿಂದ ಮತ ಚಲಾಯಿಸುವಂತೆ ಖಚಿತಪಡಿಸಿಕೊಳ್ಳಲು ಕ್ಷೇತ್ರವಾರು ಪೊಲೀಸ್ ಭದ್ರತೆ ಹೆಚ್ಚಿಸಲು ಸಿಬ್ಬಂದಿಗೆ ನಿರ್ದೇಶನ ನೀಡಿದೆ.
ಏ.29ರಂದು ಚುನಾವಣೆ ನಡೆಯಲಿರುವ 142 ಕ್ಷೇತ್ರಗಳಲ್ಲಿನ ಕೊಲ್ಕತ್ತಾ ವ್ಯಾಪ್ತಿಯ ಮೂರು ಚುನಾವಣಾ ಜಿಲ್ಲೆಗಳ ಚುನಾವಣಾ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಪಡೆಗಳ ಕಮಾಂಡರ್‌ಗಳು ಭಾಗವಹಿಸಿದ್ದ ಉನ್ನತ ಮಟ್ಟದ ಸಮನ್ವಯ ಸಭೆ ನಡೆಸಿ, ಪರಿಶೀಲನೆ ನಡೆಸಿದರು.
ದಕ್ಷಿಣ 24 ಪರಗಣ ಜಿಲ್ಲೆಯ ಕಾಕ್‌ದ್ವೀಪ್‌ಗೆ ಭೇಟಿ ನೀಡಿದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮತದಾರರು ಮುಕ್ತವಾಗಿ ಭಾಗವಹಿಸುವಂತೆ ತಿಳಿಸಿದರು.
ಏ.23ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.93.19 ಮತದಾನವಾಗಿತ್ತು. ಎ.29ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮೇ 4ರಂದು ಫಲಿತಾಂಶ ಹೊರಬೀಳಲಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…