ದೇಶ- ವಿದೇಶ

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ 9ರಂದು ಬೆಳಿಗ್ಗೆ 10 ಗಂಟೆಗೆ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಸಲಿದೆ. ಪಕ್ಷದ ಹಿರಿಯ ನಾಯಕ, ನಂದಿಗ್ರಾಮ-ಭವಾನಿಪುರ ಎರಡೂ ಕ್ಷೇತ್ರಗಳ ಶಾಸಕ ಸುವೆಂದು ಅಧಿಕಾರಿ ಮುಖ್ಯಮಂತ್ರಿ ಗದ್ದುಗೆ ಏರುವುದು ಖಚಿತವಾಗಿದೆ.

ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುವೆಂದು ಅಧಿಕಾರಿ ಹೆಸರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸಿದರು.

ಇದರೊಂದಿಗೆ ಇದೇ ಮೊದಲ ಬಾರಿಗೆ ಅಭೂತಪೂರ್ವ ಜಯ ಗಳಿಸಿರುವ ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೇ 9 ರಂದು ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್ ಸೇರಿದಂತೆ 20 ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ಯಾರೀ ಸುವೆಂದು ಅಧಿಕಾರಿ?
1970 ಡಿಸೆಂಬರ್ 15ರಂದು ಜನಿಸಿದ ಸುವೆಂದು, ಮಾಜಿ ಕೇಂದ್ರ ಸಚಿವ ಶಿಶಿರ್ ಅಧಿಕಾರಿ ಪುತ್ರ. 1995ರಲ್ಲಿ ಕಾಂಗ್ರೆಸ್‌ನಿಂದ ರಾಜಕೀಯ ಆರಂಭಿಸಿ, 2000ದಲ್ಲಿ ಟಿಎಂಸಿ ಸೇರಿ ಮಮತಾ ಅವರ ಆಪ್ತರಾಗಿದ್ದರು. 2020ರ ಡಿಸೆಂಬರ್‌ನಲ್ಲಿ ಬಿಜೆಪಿ ಸೇರಿದರು. 2016-2020ರಲ್ಲಿ ಮಮತಾ ಸಂಪುಟದಲ್ಲಿ ಸಾರಿಗೆ, ನೀರಾವರಿ ಸಚಿವರಾಗಿದ್ದರು.

 

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago