ಹೈದರಾಬಾದ್: ಕಾಲ್ತುಳಿತ ಪ್ರಕರಣದಲ್ಲಿ ಬಂಧನವಾಗಿದ್ದ ತೆಲುಗು ನಟ ಅಲ್ಲು ಅರ್ಜುನ್ ಚಂಚಲಗುಡ ಸೆಂಟ್ರಲ್ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ.
ಪುಷ್ಪ-2 ಚಿತ್ರದ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಿಂದ ಓರ್ವ ಮಹಿಳೆ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧವಾಗಿ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿ ನಾಂಪಲ್ಲಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ಬಳಿಕ ತೆಲಂಗಾಣ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು(ಡಿ.14) ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿ ತಮ್ಮ ನಿವಾಸವಾಗಿರುವ ಜುಬಿಲಿ ಹಿಲ್ಸ್‌ಗೆ ತೆರಳಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಬೆಂಬಲ ನೀಡಿದ ಎಲ್ಲರಿಗೂ ಹಾಗೂ ನನ್ನ ಎಲ್ಲಾ ಅಭಿಮಾನಿಗಳಿಗೂ ನಾನು ಧನ್ಯವಾದ ಸಮರ್ಪಿಸುತ್ತಿದ್ದೇನೆ. ಇನ್ನು ನನ್ನ ಬಗ್ಗೆ ಯಾವುದೇ ಚಿಂತೆ ಮಾಡುವ ಅಗತ್ಯವಿಲ್ಲ. ನಾನು ಕ್ಷೇಮವಾಗಿದ್ದೇನೆ ಎಂದು ಹೇಳಿದ್ದಾರೆ.
ನಾನು ಕಾನೂನು ಪಾಲಿಸುವ ನಾಗರೀಕನಾಗಿದ್ದು, ಎಲ್ಲದಕ್ಕೂ ನಾನು ಸಹಕರಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ನಾನು ಇನ್ನೊಮ್ಮೆ ಸಂತಾಪ ಕೋರುತ್ತೇನೆ. ಅದೊಂದು ದುರದೃಷ್ಟಕರ ಘಟನೆ. ಹಾಗಾಗಿ ನಾವು ಅವರ ಬಳಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…