Mysore
17
clear sky

Social Media

ಬುಧವಾರ, 21 ಜನವರಿ 2026
Light
Dark

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ ಕಿಶೋರ್‌ ಹೇಳೊದೇನು?

ಹೊಸದಿಲ್ಲಿ : ನಾನು ಯಾವ ತಪ್ಪು ಮಾಡಿಲ್ಲ, ನನ್ನ ನಿರ್ಧಾರ ಸರಿಯಿದೆ. ಹೀಗಾಗಿ ಯಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ರಾಕೇಶ್ ಕಿಶೋರ್ ಹೇಳಿಕೊಂಡಿದ್ದಾನೆ.

ಮಾಧ್ಯಮದ ಜೊತೆ ಮಾತನಾಡಿದ ಆತ, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾನೆ.

ಇದನ್ನು ಓದಿ :  ಸಿಜೆಐಗೆ ಶೂ ಎಸೆದ ವಕೀಲನ ಗಲ್ಲಿಗೇರಿಸಿ: ದೇವಗಳ್ಳಿ ಸೋಮಶೇಖರ ಒತ್ತಾಯ

ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ.ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್‍ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು.

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಕೀಟಶಾಸ್ತ್ರದಲ್ಲಿ ಪಿಎಚ್‍ಡಿ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದು, ವಕೀಲ ವೃತ್ತಿ ಮಾಡುವ ಮೊದಲು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡಿದ್ದೇನೆ. ಮಾನಸಿಕವಾಗಿಯೂ ನಾನು ಸ್ಥಿಮಿತದಲ್ಲಿದ್ದೇನೆ ಎಂದಿದ್ದಾರೆ.

ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ. ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Tags:
error: Content is protected !!