ಹೊಸದಿಲ್ಲಿ : ನಾನು ಯಾವ ತಪ್ಪು ಮಾಡಿಲ್ಲ, ನನ್ನ ನಿರ್ಧಾರ ಸರಿಯಿದೆ. ಹೀಗಾಗಿ ಯಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ರಾಕೇಶ್ ಕಿಶೋರ್ ಹೇಳಿಕೊಂಡಿದ್ದಾನೆ.
ಮಾಧ್ಯಮದ ಜೊತೆ ಮಾತನಾಡಿದ ಆತ, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾನೆ.
ಇದನ್ನು ಓದಿ : ಸಿಜೆಐಗೆ ಶೂ ಎಸೆದ ವಕೀಲನ ಗಲ್ಲಿಗೇರಿಸಿ: ದೇವಗಳ್ಳಿ ಸೋಮಶೇಖರ ಒತ್ತಾಯ
ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ.ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್‍ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು.
ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಕೀಟಶಾಸ್ತ್ರದಲ್ಲಿ ಪಿಎಚ್‍ಡಿ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದು, ವಕೀಲ ವೃತ್ತಿ ಮಾಡುವ ಮೊದಲು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡಿದ್ದೇನೆ. ಮಾನಸಿಕವಾಗಿಯೂ ನಾನು ಸ್ಥಿಮಿತದಲ್ಲಿದ್ದೇನೆ ಎಂದಿದ್ದಾರೆ.
ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ. ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…