election commission of india
ಹೊಸದಿಲ್ಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿರುವ ಚುನಾವಣಾ ಆಯೋಗ ಮತಗಳ್ಳತನ ಎಂಬ ಗಂಭೀರ ಆರೋಪದ ಮೂಲಕ ಜನರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದಿದೆ.
ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಬಳಿಕ ಹೈಕೋರ್ಟ್‌ನಲ್ಲಿ ದೂರು ದಾಖಲಿಸಬೇಕೆ ವಿನಹ ಇಂಹತ ಆರೋಪ ಸರಿಯಿಲ್ಲ. ಇದು ಜನರ ದಿಕ್ಕು ತಪ್ಪಿಸುವ ಸ್ಪಷ್ಟತೆ ಕಾಣುತ್ತಿದೆ ಎಂದು ಚುನಾವಣಾ ಆಯೋಗ ರಾಹುಲ್ ಗಾಂಧಿಗೆ ತಿರುಗೇಟು ನೀಡಿದೆ.
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಆಯೋಗದ ವಿರುದ್ಧ ಬಂದ ಎಲ್ಲಾ ಆರೋಪಗಳಿಗೆ ಉತ್ತರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಆಯೋಗ ಹೇಳಿದ್ದೇನು?
ಕೆಲವರು ಮತಗಳವು ಆರೋಪ ಮಾಡಿದ್ದಾರೆ. ಈ ಆರೋಪಕ್ಕೆ ಸಾಕ್ಷ್ಯ ನೀಡುವಂತೆ ಕೇಳಿದರೆ ಉತ್ತರ ಸಿಗಲಿಲ್ಲ. ಇಂತಹ ಸುಳ್ಳು ಆರೋಪಕ್ಕೆ ಆಯೋಗ ಮತ್ತು ಮತದಾರರು ಹೆದರುವುದಿಲ್ಲ. ಆಯೋಗದ ಹೆಗಲ ಮೇಲೆ ಬಂದೂಕು ಇಟ್ಟು ಮತದಾರರನ್ನು ಗುರಿಯಾಗಿಸಿ ರಾಜಕೀಯ ಮಾಡಲಾಗುತ್ತಿದೆ. ಈ ಆರೋಪಗಳಿಗೆ ಆಯೋಗ ಹೆದರದೇ ಬಡವರು, ಮಹಿಳೆಯರು, ಯುವಜನತೆ ಎಲ್ಲಾ ಮತದಾರರ ಜೊತೆಗೆ ಯಾವುದೇ ಭೇದ ಭಾವ ಇಲ್ಲದೇ ನಿಲ್ಲುತ್ತದೆ.
ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಾಗ ಸಿದ್ಧವಾಗಿರುವ ಪ್ರಕ್ರಿಯೆ ಅನುಸರಿಸಲಾಗುತ್ತದೆ. ಕೆಲವೊಮ್ಮೆ ಮಾಹಿತಿ ತಪ್ಪಾಗಿದ್ದರೆ ಅದನ್ನು ಸರಿಪಡಿಸಲು ಅವಕಾಶವಿದೆ. ಇದಕ್ಕೆ ಮತದಾರರ, ರಾಜಕೀಯ ಪಕ್ಷಗಳು, ಬೂತ್ ಲೆವೆಲ್ ಆಫೀಸರ್ (ಬಿಎಲ್‌ಓ) ಪಾಲುದಾರಿಕೆ ಬಹಳ ಮುಖ್ಯ. ಇದರಲ್ಲಿ ರಾಜ್ಯ ಸರ್ಕಾರದ ಅಧಿಕಾರಿಯೂ ಇರುತ್ತಾರೆ. ಅವರ ಮೂಲಕ ಎಲ್ಲ ಪ್ರಕ್ರಿಯೆ ನಡೆಯುತ್ತದೆ.
ಡ್ರಾಫ್ಟ್ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಜೊತೆಗೆ ಹಂಚಿಕೊಳ್ಳಲಾಗುತ್ತದೆ. ಇದರ ಮೇಲೂ ಸಮಸ್ಯೆ ಬಂದರೆ ಜಿಲ್ಲಾಧಿಕಾರಿಗೆ ಮನವಿ ಮಾಡಬಹುದು. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗೂ ಮತದಾರರ ಪಟ್ಟಿ ನೀಡಲಾಗುತ್ತದೆ. ಬೂತ್ ಏಜೆಂಟ್ ಬಳಿಯೂ ಇದರ ಮಾಹಿತಿ ಇರುತ್ತದೆ. ಫಲಿತಾಂಶದ ಬಳಿಕವೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಫಲಿತಾಂಶ ಪ್ರಶ್ನಿಸಬಹುದು. 45 ದಿನಗಳ ಬಳಿಕ ಯಾವುದೇ ದೂರು ದಾಖಲಿಸದೇ ಆರೋಪ ಮಾಡುವುದು ಕಾನೂನು ಬಾಹಿರ. 45 ದಿನಗಳಲ್ಲಿ ಬಾರದ ಅನುಮಾನ ಈಗ ಬರುವುದು ಅದರ ಉದ್ದೇಶ ಏನು ಜನರಿಗೆ ಗೊತ್ತಿದೆ.
ಮತದಾರರ ಪರಿಷ್ಕರಣೆ ಪ್ರತಿಬಾರಿ ನಡೆದರೆ ವಿಶೇಷ ಪರಿಷ್ಕರಣೆ ಬಹಳ ಕಡಿಮೆ ಆಗುತ್ತದೆ. ಕಳೆದ ಇಪ್ಪತ್ತು ವರ್ಷದಿಂದ ಬಿಹಾರದಲ್ಲಿ ವಿಶೇಷ ಪರಿಷ್ಕರಣೆ ನಡೆಯದ ಕಾರಣ ಮಾಡುವಂತೆ ಬಹಳ ಒತ್ತಾಯ ಕೇಳಿ ಬಂದಿತ್ತು. ಹೀಗಾಗಿ ಇಡೀ ಮತದಾರರ ಪರಿಷ್ಕರಣೆ ಹೊಸದಾಗಿ ಮಾಡಲಾಗುತ್ತದೆ. ಕೆಲವು ಮತದಾರರು ಎರಡು ಕಡೆಗೆ ಮತದಾನದ ಹಕ್ಕು ಹೊಂದಿರುತ್ತಾರೆ. ಕೆಲವರು ಹೆಸರು ಬದಲಿಸಿಕೊಂಡು ನೋಂದಣಿ ಮಾಡಿಕೊಳ್ಳುತ್ತಾರೆ. ಹೀಗಾಗಿ ಮತದಾರರ ಪಟ್ಟಿ ಪರಿಶುದ್ಧ ಮಾಡಲು ವಿಶೇಷ ಪರಿಷ್ಕರಣೆ ಮಾಡಬೇಕು.
ಆರೋಪ ಮಾಡುವ ವ್ಯಕ್ತಿ ಆ ಕ್ಷೇತ್ರದ ಮತದಾರರ ಆಗದಿದ್ದರೆ ಆರೋಪ ಮಾಡಿದಾಗ, ಈ ಬಗ್ಗೆ ಒಂದು ಪ್ರಮಾಣ ಪತ್ರ ಸಲ್ಲಿಸಬೇಕು. ಚುನಾವಣಾ ಅಧಿಕಾರಿಗಳ ಮುಂದೆ ಪ್ರಮಾಣಿಸಬೇಕು. ಇದು ಚುನಾವಣಾ ಆಯೋಗದ ನಿಯಮಗಳಲ್ಲಿ ಉಲ್ಲೇಖ ಇದೆ. ಇದು ಹೊಸ ಕಾನೂನು ಅಲ್ಲ, ಬಹಳಷ್ಟು ಹಳೆಯ ಕಾನೂನು ಆಗಿದ್ದು
ಮಷಿನ್ ರೀಡೆಬೆಲ್ ಡೇಟಾ ನೀಡುವುದರಿಂದ ಮತದಾರರ ಗೌಪ್ಯತೆ ಬಹಿರಂಗವಾಗಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಅದನ್ನು ನೀಡಲು ಸಾಧ್ಯವಿಲ್ಲ. ವಿಶೇಷ ಪರಿಷ್ಕರಣೆ ಬಿಹಾರದಲ್ಲಿ (Bihar) ಮೊದಲ ಬಾರಿಗೆ ನಡೆಯುತ್ತಿಲ್ಲ. ಈ ಹಿಂದೆ 2003 ರಲ್ಲೇ ಪರಿಷ್ಕರಣೆ ಮಾಡಲಾಗಿತ್ತು. ಈಗ ಈ ಪರಿಷ್ಕರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಸುಮ್ಮನೇ ಆರೋಪ ಮಾಡಲಾಗುತ್ತಿದೆ.
ಕೆಲವರು ಭ್ರಮೆ ಹರಡುವ ಪ್ರಯತ್ನ ಮಾಡುತ್ತಿದ್ದಾರೆ. ಹೆಜ್ಜೆಗೆ ಹೆಜ್ಜೆ ಹಾಕಿ ಎಲ್ಲರೂ ಜೊತೆಯಾಗಿ ಪ್ರಕ್ರಿಯೆ ನಡೆಸುತ್ತಿರುವುದು ಸತ್ಯ. ಬಿಹಾರದ ಏಳು ಕೋಟಿಗೂ ಅಧಿಕ ಮತದಾರರು ಆಯೋಗದ ಜೊತೆಗೆ ನಿಂತಿದ್ದಾರೆ. ಇಂತಹ ಸಮಯದಲ್ಲಿ ಆಯೋಗದ ವಿರುದ್ಧ ಪ್ರಶ್ನೆ ಎತ್ತುವ ಪ್ರಶ್ನೆ ಬರುವುದಿಲ್ಲ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…