Mysore
29
few clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಏತನ್ಮಧ್ಯೆ ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ.

ಎಲ್‌ಪಿಜಿ ಸಿಲಿಂಡರ್‌ ಕೊರತೆಯಾಗಿಲ್ಲ. ದೇಶದ ಕಚ್ಚಾ ತೈಲ ಸರಬರಾಜು ಸುಸ್ಥಿತಿಯಲ್ಲಿದೆ. ಕೆಲ ದಿನಗಳಲ್ಲಿ ಎಲ್ಲವೂ ಯಥಸ್ಥಿತಿಗೆ ಬರಲಿದೆ. ಆತಂಕದಿಂದ ಜನರು ಹೆಚ್ಚುವರಿ ಸಿಲಿಂಡರ್‌ಗಳನ್ನು ಬುಕ್ಕಿಂಗ್‌ ಮಾಡುತ್ತಿದ್ದಾರೆ. ಜನರು ಭಯದಿಂದ ಬುಕ್ಕಿಂಗ್‌ ಮಾಡುವುದನ್ನು ನಿಲ್ಲಿಸುವಂತೆ ಸಚಿವಾಲಯ ಮನವಿ ಮಾಡಿದೆ. ಮುಂದುವರೆದು ನಿತ್ಯ 50 ಲಕ್ಷ ಸಿಲಿಂಡರ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದೆ.

ಏಕಾಏಕಿ ಬುಕ್ಕಿಂಗ್‌ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಆಗುವ ತೊಂದರೆಯನ್ನು ತಪ್ಪಿಸಲು, ಗೃಹ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‌ ಫಲಾನುಭವಿಗಳ ಪಟ್ಟಿ ತಯಾರು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ತಿಳಿಸಲಾಗಿದೆ. ಇದರಿಂದ, ಆದ್ಯತೆಯ ಅನುಸಾರ ಸಿಲಿಂಡರ್‌ ವಿತರಿಸಲು ಸಾಧ್ಯವಾಗಲಿದೆ ಎಂದು ಸಚಿವಾಲಯದ ತಿಳಿಸಿದೆ.

Tags:
error: Content is protected !!