ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆಗೂ ಮುನ್ನ ಬಂಧಿಸಿದ್ದು ಏಕೆ? ಎಂದು ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಇಡಿಗೆ ಸೂಚಿಸಿದೆ.
ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ, ನೀವು ಅದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಕೊನೆಯ ಪ್ರಶ್ನೆಯೆಂದರೆ ಸಾರ್ವತ್ರಿಕ ಚುನಾವಣೆಗೆ ಮುನ್ನ ಅವರು ಸೂಚಿಸಿರುವ ಬಂಧನದ ಸಮಯದ ಬಗ್ಗೆ ಉತ್ತರಿಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿದ್ದ ಪೀಠವು ಹೇಳಿದೆ.
ದೆಹಲಿ ಅಬಕಾರಿ ಅಪರಾಧದ ಬಗ್ಗೆ ಕುರುಹು ಮತ್ತು ಪ್ರಕರಣದಲ್ಲಿ ಕೇಜ್ರಿವಾಲ್ ರವರು ನೇರವಾಗಿ ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಪುರಾವೆ ಇಲ್ಲ ಎಂದು ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಮೇ 3ರ ಶುಕ್ರವಾರದವರಗೆ ಸುಪ್ರೀಂ ಗಡವು ನೀಡಿದೆ.
ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದು, ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನಾಗಮಂಗಲ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾ ಪಂಚ ಗ್ಯಾರಂಟಿ ಯೋಜನೆಯಡಿ ಈವರೆಗೆ 1 ಲಕ್ಷದ 25 ಸಾವಿರ ಕೋಟಿ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ…
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ…
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…