ದೇಶ- ವಿದೇಶ

ಕೇಜ್ರಿವಾಲ್‌ರನ್ನು ಚುನಾವಣೆ ಮುನ್ನ ಬಂಧಿಸಿದ್ದೇಕೆ; ಇಡಿಗೆ ಸುಪ್ರೀಂ ಪ್ರಶ್ನೆ

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುತ್ತಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆಗೂ ಮುನ್ನ ಬಂಧಿಸಿದ್ದು ಏಕೆ? ಎಂದು ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಇಡಿಗೆ ಸೂಚಿಸಿದೆ.

ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ, ನೀವು ಅದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಕೊನೆಯ ಪ್ರಶ್ನೆಯೆಂದರೆ ಸಾರ್ವತ್ರಿಕ ಚುನಾವಣೆಗೆ ಮುನ್ನ ಅವರು ಸೂಚಿಸಿರುವ ಬಂಧನದ ಸಮಯದ ಬಗ್ಗೆ ಉತ್ತರಿಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿದ್ದ ಪೀಠವು ಹೇಳಿದೆ.

ದೆಹಲಿ ಅಬಕಾರಿ ಅಪರಾಧದ ಬಗ್ಗೆ ಕುರುಹು ಮತ್ತು ಪ್ರಕರಣದಲ್ಲಿ ಕೇಜ್ರಿವಾಲ್‌ ರವರು ನೇರವಾಗಿ ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಪುರಾವೆ ಇಲ್ಲ ಎಂದು ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಮೇ 3ರ ಶುಕ್ರವಾರದವರಗೆ ಸುಪ್ರೀಂ ಗಡವು ನೀಡಿದೆ.

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದು, ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

3 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

3 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

3 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

4 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

4 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

4 hours ago