ದೇಶ- ವಿದೇಶ

ನಿತೀಶ್ ಮತ್ತೆ ಬಿಹಾರ್ ಸಿಎಂ?

ಪಾಟ್ನಾ : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ನಿತೀಶ್ ಕುಮಾರ್ ಅವರನ್ನೇ ಮುಂದಿನ ಮುಖ್ಯಮಂತ್ರಿ, ಮಾಡಲು ಎನ್‌ಡಿಎ ತೀರ್ಮಾನಿಸಿದೆ.

ದಿಲ್ಲಿ ರಾಜಕಾರಣ ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಮೈತ್ರಿ ಪಕ್ಷಗಳನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ಸ್ಥಾನಗಳಲ್ಲಿ ದೊಡ್ಡಣ್ಣನಾಗಿದ್ದರೂ ತಮ್ಮನಂತಿರುವ ಸಂ.ದಳಕ್ಕೆ ಸಿಎಂ ಸ್ಥಾನ ಬಿಟ್ಟುಕೊಡಲು ಸಮ್ಮತಿಸಿದೆ. ಬಿಹಾರದಲ್ಲಿ ಉಲ್ಟಾ ಕುಮಾರ್ ಎಂದೆ ಪ್ರಸಿದ್ಧಿ ಪಡೆದಿರುವ ನಿತೀಶ್ ಕುಮಾರ್ ಯಾವ ಸಂದರ್ಭದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ಊಹೆಗೂ ನಿಲುಕದ ಪ್ರಶ್ನೆಯಾಗಿದೆ.

ಹೀಗಾಗಿ ಮುಖ್ಯಮಂತ್ರಿ ಸ್ಥಾನ ಅವರಿಗೆ ನೀಡಿದರೆ ಕೇಂದ್ರದಲ್ಲಿ ತಮ್ಮ ಸರ್ಕಾರ ಸುಭದ್ರವಾಗಿರುತ್ತದೆ ಜೊತೆಗೆ ಕೊಟ್ಟ ಮಾತಿನಂತೆ ಬಿಜೆಪಿ ನಡೆದುಕೊಂಡಿದೆ ಎಂಬ ಸಂದೇಶವನ್ನು ರಾಷ್ಟ್ರಮಟ್ಟದಲ್ಲಿ ಸಾರಲು ಕಮಲ ಪಡೆ ಮುಂದಾಗಿದೆ.

ಇದನ್ನು ಓದಿ: ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡ್ತಾರೆ: ಆರ್‌.ಅಶೋಕ

ಬಿಹಾರದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾರಿ ಸಾರಿ ಹೇಳಿದ್ದರು.

ಹಲವರು ಬಾರಿ ಮಾಧ್ಯಮದವರು ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಪ್ರಶ್ನಿಸಿದಾಗ ಆ ಸ್ಥಾನವೇ ಖಾಲಿ ಇಲ್ಲವೇ ಎಂದು ಹೇಳುವ ಮೂಲಕ ನಿತೀಶ್ ಕುಮಾರ್ ಏನ್‌ಡಿಎ ನಮ್ಮ ಸಾರಥಿ ಎಂಬುದನ್ನು ಬಿಂಬಿಸಿದ್ದರು. ಇದರ ಪರಿಣಾಮವೇ ಈ ಬಾರಿಯ ಚುನಾವಣೆಯಲ್ಲಿ ನಿತೀಶ್ ಕುಮಾರ್ ಹಿಂದಿನ ಚುನಾವಣೆಗಿಂತಲೂ ಅಬ್ಬರದ ಪ್ರಚಾರ ನಡೆಸಿದರು. ಅಲ್ಲದೆ ಮೈತ್ರಿಕೂಟಗಳಾದ ಎಲ್‌ಜೆಪಿ ಹೆಚ್‌ಎಎಂ ಸೇರಿದಂತೆ ಸಣ್ಣಪುಟ್ಟ ಪಕ್ಷಗಳ ಅಭ್ಯರ್ಥಿಯ ಗೆಲುವಿಗೂ ಶ್ರಮಿಸಿದ್ದರು. ಪ್ರಚಂಡ ಬಹುಮತ ಪಡೆದಿರುವ ಎನ್‌ಡಿಎ ಒಂದೆರಡು ದಿನಗಳಲ್ಲಿ ಶಾಸಕಾಂಗ ಸಭೆ ನಡೆಸಿ ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲು ನಿರ್ಧರಿಸಿದೆ.

೨೦೨೦ ರ ಚುನಾವಣೆಯಲ್ಲಿ, ಎನ್‌ಡಿಎ ವಿಧಾನಸಭೆಯಲ್ಲಿ ಬಹುಮತ ಗಳಿಸಿತು. ೧೨೫ ಸ್ಥಾನಗಳನ್ನು ಗೆದ್ದಿತು, ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದಾಗ್ಯೂ, ಆಗಸ್ಟ್ ೨೦೨೨ ರಲ್ಲಿ, ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಜೊತೆ ಸರ್ಕಾರ ರಚಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

4 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

4 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

4 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

5 hours ago