ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ ನೀಡಿದೆ.
ತಮಿಳುನಾಡಿನ 234 ಸೀಟುಗಳಿಗೆ ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನಿನ್ನೆ ತಾನೇ ಸಭೆ ನಡೆಸಿದ ಟಿವಿಕೆ ಪಕ್ಷವು, ನಾವು ಎನ್‌ಡಿಎ ಮೈತ್ರಿಕೂಟ ಸೇರುವುದು ಊಹಾಪೋಹ. ಈ ಬಗ್ಗೆ ಯಾವುದೇ ಚಿಂತನೆ ಇಲ್ಲ. ಈ ಕುರಿತಾದ ಮಾಧ್ಯಮ ವರದಿಗಳು ಕೇವಲ ವದಂತಿಗಳು ಎಂದು ಸ್ಪಷ್ಟನೆ ನೀಡಿದೆ.
ಇನ್ನು ದಳಪತಿ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಟಿಕೆಟ್ ಆಕಾಂಕ್ಷಿಗಳನ್ನು ಸಂದರ್ಶಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ.





